ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಬಜೆಟ್ ರಾಜ್ಯದಲ್ಲಿ ಮುಂದೆ ಬರುವ ಸರ್ಕಾರದ ತೀರ್ಮಾನ ಮಾಡುತ್ತದೆ. ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ. ಈಗ ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ. ರಾಜ್ಯದಲ್ಲಿ ಚುನಾವಣೆ ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಮನೆ ಬಿದ್ದಾಗ 5 ಲಕ್ಷ, ಕೋವಿಡ್ ನಲ್ಲಿ ಸಾವನ್ನಪ್ಪಿದಾಗ 1 ಲಕ್ಷ, ಕೋವಿಡ್ ವಾರಿಯರ್ಸ್ ಗೆ 30 ಲಕ್ಷ ಕೊಡ್ತಿವಿ ಅಂದಿದ್ರು, ಎಲ್ಲಿ ಕೊಟ್ಟರು. ಕೇಂದ್ರ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಇರತ್ತೆ. ರೈಲ್ವೆ ಯೋಜನೆ 20-30 ವರ್ಷಗಳ ಹಿಂದೆ ಘೋಷಣೆ ಆಗಿರುವುದು ಇನ್ನೂ ಆಮೆ ಗತಿಯಲ್ಲಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.