ಜಮ್ಮುವಿನ ನರ್ವಾಲ್ನ ಟ್ರಾನ್ಸ್ಪೋರ್ಟ್ ನಗರದ ಬಸ್ ಯಾರ್ಡ್ ಬಳಿ ಎರಡು ಅವಳಿ ಸ್ಫೋಟಗಳು ಸಂಭವಿಸಿವೆ. ಈ ವೇಳೆ 6 ನಾಗರಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ನಾಗರಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗಾಗಲೇ ಜಮ್ಮು ಕಾಶ್ಮೀರವನ್ನು ತಲುಪಿದೆ. ಜೊತೆಗೆ ಗಣರಾಜ್ಯೋತ್ಸವಕ್ಕೆ ಇನ್ನೂ ನಾಲ್ಕು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಈ ಯಾತ್ರೆಗೆ ಹೈಅಲರ್ಟ್ ಘೋಷಿಸಲಾಗಿದೆ.