ಕಾಂಗ್ರೆಸ್‌ಗೆ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ರಾಜೀನಾಮೆ ಭಾರಿ ಸಂಚಲನ ಸೃಷ್ಟಿಸಿದೆ. ನಬಿ ರಾಜೀನಾಮೆ ಬೆನ್ನಲ್ಲೇ ಆಜಾದ್ ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ 50ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷವೇ ಖಾಲಿಯಾಗಿದೆ ಇದರಲ್ಲಿ ಕಾಂಗ್ರೆಸ್ ರಾಜ್ಯ ಮಾಜಿ ಉಪ ಮುಖ್ಯಮಂತ್ರಿ ಸೇರಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಿರಿಯ ನಾಯಕರು, ಮಾಜಿ ಸಚಿವರು, ಶಾಸಕರು ಸೇರಿದಂತೆ ಹಲವು ನಾಯಕರು ಪಕ್ಷ ತೊರೆದಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.