ಜಯಲಲಿತಾ ಸಾವಿಗೆ ಆಪ್ತೆ ಶಶಿಕಲಾ ಕಾರಣ 608 ಪುಟಗಳ ವರದಿಯನ್ನು ನ್ಯಾ. ಆರುಮುಗಸ್ವಾಮಿ ಸರ್ಕಾರಕ್ಕೆ ವರದಿ ಸಲ್ಲಿಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಕುರಿತಾದ ತನ್ನ 608 ಪುಟಗಳ ವರದಿಯನ್ನು ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ ವರದಿ ಇಂದು ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಸಮಿತಿಯ ಪರಿಶೀಲನೆಯ ಪ್ರಕಾರ ಜಯಲಲಿತಾ ಸಾವು ಪ್ರಕರಣದಲ್ಲಿ ಅವರ ಆಪ್ತ ಸಹಾಯಕಿ ವಿ.ಕೆ ಶಶಿಕಲಾ, ಡಾ ಶಿವಕುಮಾರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ಮಾಜಿ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದೆ. ನ್ಯಾಯಮೂರ್ತಿ ಎ ಆರುಮುಗಸ್ವಾಮಿ ಜಯಲಲಿತಾ ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ನೀಡಿದ ಎಲ್ಲಾ ಬಗೆಯ ಚಿಕಿತ್ಸೆಗಳ ಬಗ್ಗೆ ಅಧ್ಯಯನ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈ ಹಿಂದೆ ವರದಿಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. ಇದಾದ ಬಳಿಕ ಕಳೆದ ಆಗಸ್ಟ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗಿತ್ತು.

Leave a Reply

Your email address will not be published. Required fields are marked *