ಜಾನ್ಸನ್& ಜಾನ್ಸನ್‌ಬೇಬಿ ಪೌಡರ್‌ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್‌ರದ್ದುಗೊಳಿಸಿದ್ದು, ಬೇಬಿ ಪೌಡರ್‌ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ.ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠವು, ಪೌಡರ್‌ಉತ್ಪಾದನೆ ಮತ್ತು ಮಾರಾಟಕ್ಕೆ ಕಂಪನಿಗೆ ಅನುಮತಿ ನೀಡಿದೆ.ಜಾನ್ಸನ್ಸ್‌ಬೇಬಿ ಪೌಡರ್‌ನಲ್ಲಿ ಹಾನಿಕಾರಕ ಅಂಶಗಳಿದ್ದು, ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸಬೇಕು ಎಂದು 2022ರ ಸೆಪ್ಟೆಂಬರ್15ರಂದು ಸೂಚನೆ ನೀಡಿ ಕಂಪನಿಯ ಪರವಾನಗಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿತ್ತು.ಇದನ್ನು ಪ್ರಶ್ನಿಸಿ ಕಂಪನಿಯು ಹೈಕೋರ್ಟ್‌ಮೊರೆ ಹೋಗಿತ್ತು. ಕಂಪನಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, “ಸೌಂದರ್ಯವರ್ಧಕ ಉತ್ಪನ್ನಗಳಿಗೆ ಗುಣಮಟ್ಟ ಮತ್ತು ಸುರಕ್ಷತೆಯ ಮಾನದಂಡ ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಉತ್ಪನ್ನಗಳಲ್ಲಿ ಸ್ವಲ್ಪ ವ್ಯತ್ಯಯ ಉಂಟಾದರೆ ಇಡೀ ಉತ್ಪಾದನಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು ಸಮಂಜಸವಾಗಿ ತೋರುತ್ತಿಲ್ಲ” ಎಂದು ಪೀಠವು ಅರ್ಜಿ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ.