ಬೆಂಗಳೂರು ಟೌನ್‌ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತಬರಲಿದೆ. ನಾವು ಈ ವರ್ಷ 130 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಚುನಾವಣೆ ಆಟದಲ್ಲಿ ಗೆಲ್ಲಲ್ಲೆಂದೆ ಆಟವಾಡುತ್ತಿದೆ. ಈ ವೇಳೆ ಜೆಡಿಎಸ್ ಪಕ್ಷಕ್ಕೆ ತನ್ನ ಆಟ ಆಡಲು ಅವಕಾಶ ನೀಡಬಾರದು ಎಂಬ ಉದ್ದೇಶವಿರುವ ಕಾರಣ ಬಿಜೆಪಿ ಜೆಡಿಎಸ್ ಪಕ್ಷದ ಜೊತೆಗೆ ಯಾವುದೇ ಕಾರಣಕ್ಕೂ ಕೈ ಜೋಡಿಸಲ್ಲ ಮೈತ್ರಿ ಕುರಿತು ಸ್ಪಷ್ಟಪಡಿಸಿದರು.ಕಾಂಗ್ರೆಸ್‌ನವರು ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಬಗ್ಗೆ ಆರೋಪ ಮಾಡಿದರೆ ಹೊರತು ಒಂದೇ ಒಂದು ದಾಖಲೆ ಸಹ ನೀಡಿಲ್ಲ. ಕೈ ನಾಯಕರ ಪರ ಮಾತನಾಡುವ ಗುತ್ತಿಗೆದಾರರ ಸಂಘದವರು ದಾಖಲೆ ನೀಡಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಮಾರು 60ಕ್ಕೂ ಹೆಚ್ಚು ಕೇಸುಗಳಿವೆ ಎಂದು ತಿರುಗೇಟು ನೀಡಿದರು.