ಜೆಡಿಎಸ್‌ಗೆ ಒಂದು ಬಾರಿ ಪೂರ್ಣ ಬಹುಮತ ನೀಡಿ. ರಾಜ್ಯದ ಚಿತ್ರಣವನ್ನೇ ಬದಲಾಯಿಸುತ್ತೇವೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ

ನವೆಂಬರ್ 1 ರಿಂದ ಪ್ರಾರಂಭವಾಗಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಇಂದು ಗವಿಗಂಗಾಧರೇಶ್ವರ ಸನ್ನಿದಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ, ರಥಯಾತ್ರೆ ವಾಹನಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್‌ಗೆ ಒಂದು ಬಾರಿ ಪೂರ್ಣ ಬಹುಮತ ನೀಡಿ. ರಾಜ್ಯದ ಚಿತ್ರಣವನ್ನೇ ಬದಲಾಯಿಸುತ್ತೇವೆ ಉಚಿತ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ರೈತ ಚೈತನ್ಯ, ಪ್ರತಿ ಮನೆಗೊಂಡು ಮನೆ ಕೊಡುವ ಯೋಜನೆ ಜಾರಿ ಮಾಡೋದಾಗಿ ಕುಮಾರಸ್ವಾಮಿ ಭರವಸೆ ನೀಡಿದರು. ಬಿಜೆಪಿ-ಕಾಂಗ್ರೆಸ್ ಪಾಪದ ಕೊಡ ತುಂಬಿದೆ. ಎರಡು ರಾಷ್ಟ್ರೀಯ ಪಕ್ಷಗಳು ಯಾವುದೇ ಯಾತ್ರೆ ಮಾಡಿದರೂ, ಸಂಕಲ್ಪ ಮಾಡಿದರೂ ಜನರು ನಂಬೋದಿಲ್ಲ ಅಂತಾ ಕಿಡಿಕಾರಿದರು. ನವೆಂಬರ್ 1 ರಿಂದ ಕೋಲಾರದ ಮುಳಬಾಗಿಲಿನಿಂದ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 36 ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ. ನವೆಂಬರ್ 1 ರಂದು 2023ರ ಚುನಾವಣೆಗೆ ಜೆಡಿಎಸ್ ನ 90-100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇನೆ ಅಂತ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *