ಜೆಡಿಎಸ್‌ಬಗ್ಗೆ ಲಘುವಾಗಿ ಮಾತನಾಡುವುದು ಬೇಕಾಗಿಲ್ಲ ಸಿದ್ದು ಪಾಳೇಗಾರಿಕೆ ಮಾಡ್ಕೊಂಡು, ದೇವೇಗೌಡರನ್ನು ಹೆದರಿಸ್ತಿದ್ರು: ಎಚ್‌.ಡಿ.ಕುಮಾರಸ್ವಾಮಿ

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ಪಕ್ಷದ ಕುರಿತು ಸಿದ್ದರಾಮಯ್ಯ ಹೇಳಿಕೆಯು ವಿಶ್ವದ ಎಂಟನೇ ಅದ್ಭುತ. ಜೆಡಿಎಸ್‌ನಲ್ಲಿ ಯಾರು ಪಾಳೆಗಾರಿಕೆ ಮಾಡಿದರು ಎಂಬುದು ಗೊತ್ತಿದೆ. ಅವರು ನಮ್ಮ ಪಕ್ಷದಲ್ಲಿದ್ದಾಗ ನಾವು ಸ್ಟೇಜ್‌ಹಾಕಬೇಕಿತ್ತು, ಜನ ಸೇರಿಸಬೇಕಿತ್ತು. ಇವರು ಬಂದು ಕಾಲು ಮೇಲೆ ಕಾಲು ಹಾಕಿಕೊಂಡು ಕೂರುತ್ತಿದ್ದರು. ಅವರನ್ನು ವೇದಿಕೆಯೇರಿಸಿ ನಾವು ರಸ್ತೆಯಲ್ಲಿ ನಿಲ್ಲುತ್ತಿದ್ದೆವು. ಸಿದ್ದರಾಮಯ್ಯ ಪಾಳೆಗಾರಿಕೆ ಮಾಡುತ್ತಾ ಜೆಡಿಎಸ್‌ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಹೆದರಿಸಿಕೊಂಡು ಇದ್ದರು ತಾಕತ್ತಿದ್ದರೆ ಕಾಂಗ್ರೆಸ್‌ಬಿಟ್ಟು ಬೇರೆ ಪಕ್ಷ ಕಟ್ಟಿಎರಡು ಸೀಟು ತರಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್‌ಅವರನ್ನು ಬೆಳೆಸದಿದ್ದರೆ ಕಾಂಗ್ರೆಸ್‌ನವರು ಎಲ್ಲಿ ಕರೆಯುತ್ತಿದ್ದರು? ಸಿದ್ದರಾಮಯ್ಯ ಅವರನ್ನು ಮೂಸಿಯೂ ನೋಡುತ್ತಿರಲಿಲ್ಲ. ಅಂತಹ ವ್ಯಕ್ತಿ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ ಎಂದು ಹರಿಹಾಯ್ದರು.

Leave a Reply

Your email address will not be published. Required fields are marked *