ಜೆಡಿಎಸ್‌ರಾಜ್ಯ ಘಟಕಗಳನ್ನು ವಿಸರ್ಜಿಸಿದ ಹೆಚ್.ಡಿ. ದೇವೇಗೌಡ: ಹೊಸ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಯ್ಕೆ!

ಬೆಂಗಳೂರಿನ ಜೆಡಿಎಸ್‌ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು 19 ಜನ ಶಾಸಕರು, ವಿಧಾನ ಪರಿಷತ್‌ಸದಸ್ಯರನ್ನು ಒಳಗೊಂಡಂತೆ 2 ಸಭೆಗಳನ್ನು ಮಾಡಲಾಗಿದ್ದು, ಅದರಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ನಾವು ಸರ್ಕಾರದಲ್ಲಿ ಭಾಗಿಯಾಗಿದ್ದೇವೆ, ಮಂತ್ರಿಗಳೂ ಆಗಿದ್ದೇವೆ. ಆದರೆ, ನಾವು ಯಾವ ಕಾರಣದಿಂದ ಭಾರತೀಯ ಜನತಾ ಪಾರ್ಟಿಯೊಂದಿಗೆ ಹೋಗುವ ಸನ್ನಿವೇಶವನ್ನು ತಂದಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಂಡು ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್‌ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರಿಂದ ಜೆಡಿಎಸ್‌ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದು, ತಾವು ಕಾಂಗ್ರೆಸ್‌ನೇತೃತ್ವದ ಇಂಡಿ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಹೀಗಾಗಿ, ಇಬ್ರಾಹಿಂ ಅವರನ್ನು ಪಕ್ಷದಿಂದ ಹೊರ ಹಾಕುವ ದೃಷ್ಟಿಯಿಂದ ಜೆಡಿಎಸ್‌ರಾಜ್ಯ ಘಟಕಗಳನ್ನೇ ವಿಸರ್ಜನೆ ಮಾಡಲಾಗುತ್ತಿದೆ. ಮುಂದುವರೆದು ಜೆಡಿಎಸ್‌ರಾಜ್ಯಾಧ್ಯಕ್ಷನಾಗಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್‌ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.ಬಿಜೆಪಿ ಜೊತೆಗೆ ಮೈತ್ರಿ ಗೆ ಎಲ್ಲ ರಾಜ್ಯ ಘಟಕಗಳ ಸಮ್ಮತಿ ಇತ್ತು. ಅನೇಕ ಮುಸ್ಲಿಂ ಮುಖಂಡರು ನಮ್ಮ ಜೊತೆ ಇದ್ದಾರೆ. ನಾವು ಧೃತಿಗೆಡಬೇಕಿಲ್ಲ. ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್‌ಸದಸ್ಯರು ಹಾಗೂ ನಾಯಕರ ಸಮ್ಮತಿಯಂತೆ ರಾಜ್ಯದ ಜೆಡಿಎಸ್‌ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಜೆಡಿಎಸ್‌ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗುತ್ತಿದೆ. ಜೊತೆಗೆ ಕೆಲವು ಪದಾಧಿಕಾರಿಗಳ ನೇಮಕ ಮಾಡ್ತೀವಿ. ಮುಖಂಡರ ಜೊತೆ ಚರ್ಚೆ ಮಾಡಿ ಮೂರು ದಿನಗಳ ಒಳಗೆ ಮಾಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *