ಟಿ ನರಸೀಪುರದಲ್ಲಿ ವೇಣುಗೋಪಾಲ್‌ಹತ್ಯೆಯ ಹಿಂದೆ ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್‌ಬೋಸ್‌ಕೈವಾಡವಿದೆ: ಸೂಲಿಬೆಲೆ

ಮಾತನಾಡಿದ ಯುವ ಬ್ರಿಗೇಡ್‌ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇರವಾಗಿ ಆರೋಪ ಮಾಡಿದ್ದಾರೆ. ವೇಣುಗೋಪಾಲ್ ಹತ್ಯೆ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡ ಇದೆ. ಮಹದೇವಪ್ಪ ಮಗ ಸುನೀಲ್‍ಬೋಸ್ ತನ್ನ ಸಹಚರರಿಂದ ಈ ಕೆಲಸ ಮಾಡಿಸಿದ್ದಾರೆ ವೇಣುಗೋಪಾಲ್‌ಮೃತದೇಹವನ್ನು ನೋಡಲು ತೆರಳಿದ ಮೊದಲ ದಿನವೇ ಟಿ ನರಸಿಪುರದ ಸ್ನೇಹಿತರು ಈ ಕೃತ್ಯವನ್ನು ಸುನಿಲ್‌ಬೋಸ್‌ಕಡೆಯವರು ಮಾಡಿದ್ದಾರೆ ಎಂದು ಹೇಳಿದ್ದರು. ಆದರೆ ಅಧಿಕೃತ ದಾಖಲೆಗಳು ಇಲ್ಲದೇ ಹೇಳುವುದು ಸರಿಯಲ್ಲ ಎಂದು ನಾನು ಹೇಳಲಿಲ್ಲ. ಆದರೆ ಈಗ ಸುನಿಲ್‌ಬೋಸ್‌ಜೊತೆಗೆ ಆರೋಪಿಗಳ ಇರುವ ಸಂಬಂಧ, ಫೋಟೋಗಳು ಎಲ್ಲವನ್ನು ನೋಡಿದಾಗ ಇದು ದೃಢವಾಗುತ್ತದೆ. ದಲಿತ ವರ್ಗಕ್ಕೆ ಸೇರಿದ್ದ ವೇಣುಗೋಪಾಲ್‌ಆರಂಭದಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಯುವ ಬ್ರಿಗೇಡ್‌ಸಂಪರ್ಕಕ್ಕೆ ಬಂದ ಬಳಿಕ ತಂಡವನ್ನು ಕಟ್ಟಿ ಕೆರೆ ಸ್ವಚ್ಛಗೊಳಿಸಿ ಬಾಳೆ ಮಂಡಿ ಹಾಕುವ ಮಟ್ಟಕ್ಕೆ ಬೆಳೆದಿದ್ದರು. ಅಷ್ಟೇ ಅಲ್ಲದೇ ತಾಲೂಕಿನ ಯುವ ಬಿಗ್ರೇಡ್‌ಸಂಚಾಲಕರಾಗಿದ್ದರು. ವೇಣುಗೋಪಾಲ್‌ಬೆಳವಣಿಗೆಯನ್ನು ಸಹಿಸದೇ ಅವರನ್ನು ಸುನಿಲ್‌ಬೋಸ್‌ಕಡೆಯವರು ಹತ್ಯೆ ಮಾಡಿದ್ದಾರೆ.ಪೊಲೀಸರು ತನಿಖೆಯನ್ನು ಸರಿಯಾಗಿ ನಡೆಸಿದರೆ ಸತ್ಯಾಂಶ ಹೊರ ಬರಬಹದು.ಒಂದು ವೇಳೆ ಈಗಲೇ ಕ್ರಮ ಕೈಗೊಳ್ಳದೇ ಇದ್ದರೆ ಮುಂದೆ ಮತ್ತಷ್ಟು ಯುವ ಜನರ ಹತ್ಯೆಯಾಗಬಹುದು. ಮತದಾನಕ್ಕೆ ಹಾಕಿದ ಶಾಯಿ ಇನ್ನೂ ಅಳಿಸಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು 60 ದಿನ ಆಗಿಲ್ಲ. ಇನ್ನು 60 ತಿಂಗಳಲ್ಲಿ ಎಷ್ಟು ಮಂದಿ ಬಲಿಯಾಗಬೇಕು ಎಂದು ಸೂಲಿಬೆಲೆ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದರು.ಕೃತ್ಯ ಯಾರೇ ಮಾಡಿದರೂ ಅದು ತಪ್ಪು. ಬಿಜೆಪಿ ಪಕ್ಷದ ಸದಸ್ಯನಾಗಿದ್ದರೆ ಆತನನ್ನು ವಜಾ ಮಾಡಲಿ, ಅದೇ ರೀತಿಯಾಗಿ ಸಂಪುಟದಿಂದ ಮಹದೇವಪ್ಪ ಅವರನ್ನು ಕೈಬಿಡಲಿ. ಈ ಮೂಲಕ ಎಲ್ಲಾ ಕಾಂಗ್ರೆಸ್‌ನಾಯಕರಿಗೆ ಸಿದ್ದರಾಮಯ್ಯ ಒಂದು ಸಂದೇಶ ಕಳುಹಿಸಲಿ.

Leave a Reply

Your email address will not be published. Required fields are marked *