ಟೆಸ್ಲಾ ಮುಖ್ಯಸ್ಥ ಹಾಗೂ ಟ್ವಿಟ್ಟರ್ಸಿಇಒ ಎಲೋನ್ಮಸ್ಕ್ಇದೀಗ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಟ್ವಿಟ್ಟರ್ನಲ್ಲಿ ಫಾಲೋ ಮಾಡುತ್ತಿದ್ದಾರೆ. ಈ ವಿಷಯ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. 87.7 ಮಿಲಿಯನ್ ಫಾಲೋವರ್ಸ್ಗಳನ್ನ ಹೊಂದಿರುವ ಪ್ರಧಾನಿ ಮೋದಿ ಅವರನ್ನು ಟ್ವಿಟರ್ನಲ್ಲಿ ಅತಿ ಹೆಚ್ಚು ಫಾಲೋ ಮಾಡುತ್ತಿರುವ ವಿಶ್ವ ನಾಯಕರಲ್ಲಿ ಒಬ್ಬರಾಗಿದ್ದಾರೆ. ಕೆಲವರು ಮಸ್ಕ್ಮೋದಿಯನ್ನ ಫಾಲೋ ಮಾಡಲು ಕಾರಣವೇನು ಎಂದು ಪ್ರಶ್ನಿಸಿದ್ದು, ಮಸ್ಕ್, ಮೋದಿಯನ್ನ ಫಾಲೋ ಮಾಡ್ತಿದ್ದಾರೆ ಅಂದ್ರೆ ಶೀಘ್ರದಲ್ಲೇ ಟೆಸ್ಲಾ ಭಾರತಕ್ಕೆ ಬರುತ್ತೆ ಎಂದರ್ಥ ಎಂದು ಮತ್ತೊಬ್ಬರು ಟಾಂಗ್ಕೊಟ್ಟಿದ್ದಾರೆ.ಈ ವಿಚಾರ ಇದೀಗ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ.