ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ಕುಮಾರ್‌ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ಪಕ್ಷ ಸೇರ್ಪಡೆಯಾಗಿದ್ದಾರೆ. ಈವರೆಗೆ ಜೆಡಿಎಸ್‌ಪಕ್ಷದಲ್ಲಿದ್ದ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಜೆಡಿಎಸ್‌ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ವೇಳೆ ಜೆಡಿಎಸ್‌ನಲ್ಲಿ ಜತೆಗಿದ್ದ ಸಹೋದರ ಮಧು ಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್‌ಸೇರ್ಪಡೆಯಾಗಿ ಸೊರಬದಿಂದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿದ್ದಾರೆ.