ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತವಾಗಿದೆ. ಜಕ್ಕೂರ್ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆದ ಕೆಲ ಕ್ಷಣಗಳ ಬಳಿಕ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡಿದೆ. ಪೈಲೆಟ್ ಹರಸಾಹಸದಿಂದ ಪಾರಾಗಿದ್ದಾರೆ. ಹದ್ದು ಡಿಕ್ಕಿಯಾದ ರಭಸಕ್ಕೆ ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆ ಶಿವಕುಮಾರ್ ಜೊತೆಗಿದ್ದ ಇತರ ಕೆಲವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕೆ ಶಿವಕುಮಾರ್ ಕೂದಲೆಳೆ ಅಂತರದ ಅಪಾಯದಿಂದ ಪಾರಾಗಿದ್ದಾರೆ. ಹೀಗಾಗಿ ಪೈಲೆಟ್ ತಕ್ಷಣ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಇತ್ತ ಕೋಲಾರದ ಮುಳಭಾಗಿಲಿನಲ್ಲಿ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೀಗಾಗಿ ಡಿಕೆ ಶಿವಕುಮಾರ್ ರಸ್ತೆ ಮಾರ್ಗದ ಮೂಲಕ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದಾರೆ.