ಡಿ.ಕೆ.ಶಿವಕುಮಾರ್‌ಅವರು ನಮ್ಮ ಬಿಜೆಪಿ ಶಾಸಕರಿಗೆ ಕರೆ ಮಾಡಿದ್ದಾರೆ. ನೀವು ಬಂದರೆ ನಿಮಗೆ ಟಿಕೆಟ್‌ಕೊಡುವುದಾಗಿ ಹೇಳಿದ್ದಾರೆ : ಸಿಎಂ ಬೊಮ್ಮಾಯಿ

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್‌ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧಪಡಿಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಅವರು ನಮ್ಮ ಬಿಜೆಪಿ ಶಾಸಕರಿಗೆ ಕರೆ ಮಾಡಿದ್ದಾರೆ. ನೀವು ಬಂದರೆ ನಿಮಗೆ ಟಿಕೆಟ್‌ಕೊಡುವುದಾಗಿ ಹೇಳಿದ್ದಾರೆ. ಆದರೆ, ನಮ್ಮ ಪಕ್ಷದ ಶಾಸಕರು ಶಿವಕುಮಾರ್‌ಆಹ್ವಾನ ತಿರಸ್ಕರಿಸಿದ್ದಾರೆ. ಬರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಶಿವಕುಮಾರ್‌ನಮ್ಮ ಶಾಸಕರನ್ನು ಸಂಪರ್ಕಿಸಿರುವುದು ಅವರ ಪರಿಸ್ಥಿತಿ ತೋರಿಸುತ್ತದೆ. ಕಾಂಗ್ರೆಸ್‌ನಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆಯಿದೆ. ಒಂದು ವೇಳೆ ಗಟ್ಟಿಯಾದ ಅಭ್ಯರ್ಥಿಗಳು ಇದ್ದಿದ್ದರೆ ನಮ್ಮ ಶಾಸಕರಿಗೆ ಕರೆ ಮಾಡುತ್ತಿರಲಿಲ್ಲ.

Leave a Reply

Your email address will not be published. Required fields are marked *