ಡಿ.ಕೆ.ಶಿವಕುಮಾರ್ ಬಳಿಕ ಅವರ ಪುತ್ರಿ ಐಶ್ವರ್ಯಗೂ ಸಿಬಿಐ. ನೋಟಿಸ್; 10 ದಿನದಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ

ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ. 10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್‌ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯ ಮಾತ್ರವಲ್ಲದೇ ಕಾಲೇಜಿನ ಎಲ್ಲಾ ನಿರ್ದೇಶಕರಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಮೂಲಕ ಸಿಬಿಐ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *