ಡಿಸೆಂಬರ್ 29 ರಿಂದ ಆಟೋ ಚಾಲಕರು ಆಟೋ ಸಂಚಾರ ಬಂದ್ ಮಾಡಲು ತೀರ್ಮಾನಿಸಿದ್ದು, ಆಟೋ ಓಡಾಟ ಬಹುತೇಕ ಸ್ತಬ್ಧವಾಗುವ ಸಾಧ್ಯತೆ ಇದೆ. ಬರುವ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸುವ ಖುಷಿಯಲ್ಲಿದ್ದ ಜನರಿಗೆ ಆಟೋ ಚಾಲಕರು ಶಾಕ್ ಕೊಟ್ಟಿದ್ದಾರೆ. ಸಾರಿಗೆ ಇಲಾಖೆ ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಬ್ಯಾನ್ ಮಾಡಬೇಕು, ಬೌನ್ಸ್ ಎಲೆಕ್ಟ್ರಿಕ್‌ಬೈಕ್‌ಗೆ ನೀಡಿರುವ ಅನುಮತಿ ತೆಗೆದುಹಾಕಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಮೊದಲ ಹಂತದಲ್ಲಿ 100 ಎಲೆಕ್ಟ್ರಿಕ್‌ಬೈಕ್‌ಗಳನ್ನ ರಸ್ತೆಗಿಳಿಸಲು ನಿರ್ಧರಿಸಿರುವ ಬೌನ್ಸ್ ಕಂಪನಿ, ನಂತರ ಹಂತ-ಹಂತವಾಗಿ ಸಾವಿರ ಇ- ಬೈಕ್‌ಗಳನ್ನ ರಸ್ತೆಗಿಳಿಸಲು ನಿರ್ಧಾರ ಮಾಡಿದೆ. ಕೊರೊನಾ ಸಂಕಷ್ಟದಿಂದ ಬೇಸತ್ತಿರುವ ಚಾಲಕರಿಗೆ ಎಲೆಕ್ಟ್ರಿಕ್‌ಬೈಕ್ ಟ್ಯಾಕ್ಸಿ ಗಾಯದ ಮೇಲೆ ಬರೆ ಎಳೆದಂತೆ ಆಗಲಿದೆ ಎಂದು ಸಾರಿಗೆ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.