ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್‌ಮಾಡಿರುವ ಸಿಎಂ ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ಧ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.