ತಮಿಳುನಾಡು ಅಬಕಾರಿ ಸಚಿವರ ಬಂಧನ, ಇದು BJP ಸೇಡಿನ ರಾಜಕಾರಣ – ಮೋದಿ ಸರ್ಕಾರವನ್ನು ವಿರೋಧಿಸುವವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ.; ಎಂ.ಕೆ ಸ್ಟಾಲಿನ್‌

ಸಚಿವ ವಿ.ಸೆಂಥಿಲ್ ಬಾಲಾಜಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಬುಧವಾರ ಶೋಧ ನಡೆಸಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆಅಡಿಯಲ್ಲಿ ಬಂಧಿಸಲು ಮುಂದಾಯಿತು. ಸತತ 24 ಗಂಟೆಗಳ ಕಾರ್ಯಾಚರಣೆ ನಡೆಸಿದ ಇಡಿ ತಂಡ ಮಧ್ಯರಾತ್ರಿ 1:30ರ ಸುಮಾರಿಗೆ ಸಚಿವರನ್ನ ಬಂಧಿಸಲು ಮುಂದಾದಾಗ ತಕ್ಷಣವೇ ಎದು ನೋವು ಕಾಣಿಸಿಕೊಂಡಿತ್ತು. ಕಾರಿನಲ್ಲೇ ಎದೆ ಬಿಗಿಹಿಡಿದುಕೊಂಡು ಅತ್ತು ಗೋಗರೆದಿದ್ದರು. ಆ ನಂತರ ಅವರನ್ನ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಇಡಿ ಬಂಧನಕ್ಕೊಳಗಾದ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.‌ಇಡಿ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ ಕೆಲ ಗಂಟೆಗಳಲ್ಲೇ ಭೇಟಿ ಮಾಡಿ ಆರೋಗ್ಯ ಸ್ಥಿತಿಗತಿಯನ್ನ ವೀಕ್ಷಿಸಿದ್ದಾರೆ. ಅಲ್ಲದೇ ಇದು ಬಿಜೆಪಿ ಸೇಡಿನ ರಾಜಕಾರಣ ಎಂದು ಕಿಡಿ ಕಾರಿದ್ದಾರೆ. ಇದೇ ವೇಳೆ ಆಸ್ಪತ್ರೆ ಮುಂಭಾಗ ನೆರೆದಿದ್ದ ಕಾರ್ಯಕರ್ತರು, ತನಿಖಾ ಸಂಸ್ಥೆಯೊಂದಿಗೆ ಸಹಕರಿಸಿದರೂ ಸೆಂಥಿಲ್ ಬಾಲಾಜಿ ಅವರ ಮೇಲೆ ಒತ್ತಡ ಹೇರಲಾಗಿತ್ತು. ಇದೇ ಅವರ ಎದೆ ನೋವಿಗೆ ಕಾರಣ ಎಂದು ರಾಜ್ಯಪಾಲ ಆರ್.ಎನ್ ರವಿ ವಿರುದ್ಧ ದೂರಿದರು. ಸೆಂಥಿಲ್ ಬಾಲಾಜಿ ವಕೀಲರು ಮತ್ತು ಡಿಎಂಕೆ ನಾಯಕ ಎನ್.ಆರ್ ಎಲಾಂಗೋ ಸಹ ಇದು ಸಂಪೂರ್ಣ ಅಸಾಂವಿಧಾನಿಕ ಹಾಗೂ ಕಾನೂನು ಬಾಹಿರವಾದ ಬಂಧನ. ನಾವು ಕಾನೂನಿನ ಮೂಲಕವೇ ಹೋರಾಡುತ್ತೇವೆ. ಮತ್ತೋರ್ವ ಸಚಿವ ಉದಯನಿಧಿ ಸ್ಟಾಲಿನ್, ಏನೇ ಬಂದರೂ ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆದರಿಕೆ ರಾಜಕೀಯಕ್ಕೆ ನಾವು ಹೆದರುವುದಿಲ್ಲ.ಈ ದಾಳಿಗಳು ಕೇವಲ ರಾಜಕೀಯ ಪ್ರೇರಿತವಲ್ಲ, ಸೇಡಿನ ರಾಜಕಾರಣದ ಕ್ರಮ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಅಪಮಾನವಾಗಿದೆ. ಪಶ್ಚಿಮ ಬಂಗಾಳ, ದೆಹಲಿಯಂತ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ. ಮೋದಿ ಸರ್ಕಾರವನ್ನು ವಿರೋಧಿಸುವವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಸೆಂಥಿಲ್‌ಅವರನ್ನ ಇಡಿ ಬಂಧಿಸಿರುವುದನ್ನ ಖಂಡಿಸಿದ್ದಾರೆ

Leave a Reply

Your email address will not be published. Required fields are marked *