ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಮತ್ತು ಸಿಬ್ಬಂದಿಯ ಕ್ರೌರ್ಯಕ್ಕೆ ಬಲಿಯಾದ ಬಾಣಂತಿ, ಆಕೆಯ ಇಬ್ಬರು ನವಜಾತ ಶಿಶುಗಳ ದಾರುಣ ಸಾವು ವಿಚಾರದಲ್ಲಿ ಜನರ ದಾರಿ ತಪ್ಪಿಸಲೆತ್ನಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಚಿವ ಸ್ಥಾನಕ್ಕೆ ಸುಧಾಕರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನೈತಿಕತೆ ಇದ್ದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಪಡಿಸಿದ್ದಾರೆ.