ಮಂಗಳವಾರ ಬೆಳಗ್ಗೆ ನಗರದ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ. ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನಲೆಯಲ್ಲಿ ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಳ್ಗೊಂಡ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಜಯನಗರ, ಬಸವನಗುಡಿ, ಚಿಕ್ಕಪೇಟೆ, ಯಶವಂತರಪುರ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ.