ತ್ರಿಪುರಾದಲ್ಲಿ ಮತದಾನ ಆರಂಭವಾಗಿದ್ದು, ತ್ರಿಕೋನ ಸ್ಪರ್ಧೆಗೆ ಈ ವಿಧಾನಸಭಾ ಚುನಾವಣೆ ಸಾಕ್ಷಿಯಾಗಿದೆ. ಆಡಳಿತಾರೂಢ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ, ಸಿಪಿಎಂ ಅನಿರೀಕ್ಷಿತವಾಗಿ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿದೆ. ಎಲ್ಲಕ್ಕಿಂತ ಹೆಚ್ಚಾಗಿ ಹೊಸ ಪಕ್ಷ ತಿಪ್ರಾ ಮೋಥಾ ರಾಷ್ಟ್ರೀಯ ಪಕ್ಷಗಳಿಗೆ ಸವಾಲು ಹಾಕಿದೆ. 30 ವರ್ಷಗಳಿಗೂ ಹೆಚ್ಚು ಕಾಲ, ತ್ರಿಪುರಾದಲ್ಲಿ ಸಿಪಿಎಂ ಆಡಳಿತವಿತ್ತು. 2018 ರಲ್ಲಿ ರಾಜ್ಯದಲ್ಲಿ ಯಾವುದೇ ಅಸ್ತಿತ್ವವನ್ನು ಹೊಂದಿರದ ಬಿಜೆಪಿ 60 ಸ್ಥಾನಗಳಲ್ಲಿ 36 ಸ್ಥಾನಗಳನ್ನು ಗೆದ್ದು ಇತಿಹಾಸವನ್ನು ಬರೆದಿತು. ಬಹುಮತದ 31 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯ ಸಾಧಿಸಿದ್ದರೂ ಕೂಡ, ಎಂಟು ಸ್ಥಾನಗಳನ್ನು ಪಡೆದುಕೊಂಡಿದ್ದ ಪ್ರಾದೇಶಿಕ ಐಪಿಎಫ್‌ಟಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಶಾಸಕರು ಪಕ್ಷಾಂತರ ಮಾಡುವ ಭಯಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿತ್ತು