ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಶನಿವಾರದಂದು ಧಾರಾಕಾರ ಮಳೆಯಿಂದ ಉಂಟಾದ ಭಾರಿ ಪ್ರವಾಹ ಮತ್ತು ಭೂಕುಸಿತದಲ್ಲಿ 47 ಜನರು ಮೃತಪಟ್ಟಿದ್ದಾರೆ. ಜೊತೆಗೆ 60 ಗ್ರಾಮಸ್ಥರು ಪ್ರವಾಹದಲ್ಲಿ ನಾಪತ್ತೆಯಾಗಿದ್ದಾರೆ. ಕೆಲವರು ಮಳೆನೀರು, ಮಣ್ಣು, ಕಲ್ಲುಗಳು ಮತ್ತು ಮರಗಳ ಕೆಳಗೆ ಹೂತುಹೋಗಿರುವುದು ವರದಿಯಾಗಿದೆ.
ಹಠಾತ್ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ ಬದುಕುಳಿದ ಕುಸಿಯಾಂಗ್ ಗ್ರಾಮಸ್ಥರ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ ಎಂದು ಸಿನಾರಿಂಬೊ ದೂರವಾಣಿ ಮೂಲಕ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ. ಈ ಚಂಡಮಾರುತದಿಂದ ನಮ್ಮ ಸಮುದಾಯ ನೆಲಸಮವಾಗಿದೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.