ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.ಹುಬ್ಬಳ್ಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಇಷ್ಟು ದಿನದ ದೀನದಲಿತರನ್ನು ಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿತ್ತು. ಅವರಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡಿದ್ದೇವೆ. ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಗೆ ಇರಲಿಲ್ಲ, ಅವರದ್ದು ಡೋಂಗಿತನ. ಹತಾಶೆಯಿಂದ ಕಾಂಗ್ರೆಸ್ ಆರೋಪಿಸುತ್ತಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ನಿರ್ಧಾರಗಳಿಂದ ಕಾಂಗ್ರೆಸ್ಗೇ ತಿರುಗು ಬಾಣ ಆಗಲಿದೆ. ಕಾಂಗ್ರೆಸ್ ಮಾಡದ್ದನ್ನು ಬಿಜೆಪಿ ಮಾಡಿ ತೋರಿಸಿದೆ’ ಇಷ್ಟುದಿನ ಅವರು ಹೇಳಿಕೊಂಡು ಬಂದಿದ್ದು ಅವರಿಗೆ ತಿರುಗು ಬಾಣ ಆಗಲಿದೆ ಎಂದರು