ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕಾರ್ಯಕ್ರಮದಲ್ಲಿ ಗುರುವಾರ ವಾಷಿಂಗ್ಟನ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಮೋದಿ ಮತ್ತು ಬೈಡನ್ ಎಚ್ಚರಿಕೆ ಕೊಟ್ಟಿದ್ದಾರೆ.”ಪಾಕಿಸ್ತಾನ ಗಡಿಯಾಚೆ ಭಯೋತ್ಪಾದನೆ, ಭಯೋತ್ಪಾದಕರ ರಕ್ಷಣೆ ಮಾಡುತ್ತಿರುವುದನ್ನು ಉಭಯ ನಾಯಕರು ಬಲವಾಗಿ ಖಂಡಿಸಿದ್ದಾರೆ. ಪಾಕಿಸ್ತಾನ ತನ್ನ ನಿಯಂತ್ರಣದಲ್ಲಿರುವ ಯಾವುದೇ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು” ಎಂದು ಹೇಳಿಕೆ ನೀಡಲಾಗಿದೆ.2008ರಲ್ಲಿ ಮುಂಬೈನ ತಾಜ್ ಹೋಟೆಲ್‌ಮೇಲಿನ ಭಯೋತ್ಪಾದಕ ದಾಳಿಯ ಹಿಂದಿನ ಅಪರಾಧಿಗಳನ್ನು ಹಿಡಿದು, ಕಠಿಣವಾಗಿ ಶಿಕ್ಷೆ ನೀಡಬೇಕು ಎಂದು ಉಭಯ ನಾಯಕರು ಪಾಕಿಸ್ತಾನಕ್ಕೆ ಒತ್ತಾಯಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಈಗಾಗಲೇ ಕಠಿಣ ನಿಲುವು ತೆಗೆದುಕೊಂಡಿದೆ. ಭಾರತದ ನೆಲದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ ಎನ್ನುವ ಖಡಕ್ ಸಂದೇಶವನ್ನು ನೀಡಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ 2019ರಲ್ಲಿ ಭಾರತ ವೈಮಾನಿಕ ದಾಳಿ ಮಾಡುವ ಮೂಲಕ ಪಾಕ್ ಸೊಕ್ಕಡಗಿಸಿತ್ತು.