ದೆಹಲಿಯಲ್ಲಿ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಅಧಿಕೃತ ಭೇಟಿಯಲ್ಲಿರುವ ವಿಯೆಟ್ನಾಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್ ಈ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಾನು ಯಾವತ್ತೂ ಮಾಡುವಂತೆ, ಮೋದಿ ಅವರೊಂದಿಗೆ ಮಾನವ ಹಕ್ಕುಗಳನ್ನು ಗೌರವಿಸುವುದು, ನಾಗರಿಕ ಸಮಾಜದ ಪಾತ್ರ, ಮುಕ್ತ ಮಾಧ್ಯಮ ಮತ್ತು ಬಲವಾದ ಮತ್ತು ಸಮೃದ್ಧ ದೇಶವನ್ನು ನಿರ್ಮಿಸುವ ಕುರಿತಂತೆ ಚರ್ಚೆ ನಡೆಸಿದ್ದೇನೆ ಎಂದು ಯುಎಸ್ ಅಧ್ಯಕ್ಷರು ಹೇಳಿದ್ದಾರೆ.