ದೆಹಲಿಯ ಈ ಹಿಂದಿನ ಮದ್ಯ ಮಾರಾಟ ನೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ದಿಲ್ಲಿಯ ಆಮ್ ಆದ್ಮಿ ಪಕ್ಷದ ಕಚೇರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದು, ಗುಂಪನ್ನು ನಿಯಂತ್ರಿಸಲು ಹಾಕಲಾಗಿದ್ದ ಬ್ಯಾರಿಕೇಡ್ಗಳನ್ನು ಭೇದಿಸಲು ಸಹ ಯತ್ನಿಸಿದ್ದಾರೆ. ದೆಹಲಿ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಸಲ್ಲಿಸಿದ ಎರಡನೇ ಚಾರ್ಜ್ಶೀಟ್ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ಕೇಜ್ರಿವಾಲ್ಹೆಸರಿದ್ದು, ಈ ಹಿನ್ನೆಲೆ ಬಿಜೆಪಿ, ದೆಹಲಿ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದೆ ಮತ್ತು ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.