ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಎಎಪಿ ಕಚೇರಿಯಲ್ಲಿ ಬೆಂಬಲಿಗರು ಪಕ್ಷದ ಧ್ವಜಗಳನ್ನು ಹಿಡಿದು ಸಿಹಿ ಹಂಚುವ ಮತ್ತು ಡ್ರಮ್‌ಗಳ ಬಡಿತಕ್ಕೆ ನೃತ್ಯ ಮಾಡುವ ಮೂಲಕ ಸಂಭ್ರಮಿಸುತ್ತಿದ್ದಾರೆ.ಎಎಪಿ 136 ವಾರ್ಡ್‌ಗಳಲ್ಲಿ ಜಯಭೇರಿ ಬಾರಿಸಿದರೆ, ಬಿಜೆಪಿ 100 ಸ್ಥಾನ ಗಳಿಸಿದೆ. ಜೊತೆಗೆ ಕಾಂಗ್ರೆಸ್ ಹತ್ತು ವಾರ್ಡ್‌ಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ.