ಗುಜರಾತ್ ವಿಧಾನಸಭಾ ಚುನಾವಣೆ ಹಾಗೂ ದೆಹಲಿಯ ಮಹಾನಗರಪಾಲಿಕೆ ಚುನಾವಣಾ ಸೋಲಿನ ಭೀತಿಯಿಂದ ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸಿದ್ದು, ದೆಹಲಿ ಸಂಸದ ಮನೋಜ್ ತಿವಾರಿ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಮನೋಜ್ ತಿವಾರಿ ಕೇಜ್ರಿವಾಲ್ ಭದ್ರತೆಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಮರು ದಿವಸ ಸಿಸೋಡಿಯಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸದ ಮನೋಜ್ ತಿವಾರಿ ಬಹಿರಂಗವಾಗಿಯೇ ತಮ್ಮ ಗುಂಡಾಗಳಿಗೆ ದಾಳಿ ಮಾಡುವಂತೆ ಹೇಳುತ್ತಿದ್ದಾರೆ. ಆದರೆ ಎಎಪಿ ಇಂತಹ ನೀಚ ರಾಜಕಾರಣಕ್ಕೆ ಹೆದರೋದಿಲ್ಲ. ಗೂಂಡಾಗಿರಿ ಮಾಡುವ ಜನರಿಗೆ ಅವರದ್ದೇ ರೀತಿಯಲ್ಲಿ ತಕ್ಕ ಉತ್ತರ ಕೊಡುತ್ತದೆ ಎಂದು ಸಿಸೋಡಿಯಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.