ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು. ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ. ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಒತ್ತಿ ಹೇಳಿದರು.