ಹರಿಯಾಣದ ಫರಿದಾಬಾದ್ನಲ್ಲಿರುವ ಹೊಸ ‘ಅಮೃತ’ ಆಸ್ಪತ್ರೆ ದೇಶದ ಅತಿ ದೊಡ್ಡ ಖಾಸಗಿ ಆಸ್ಪತ್ರೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ, ಕೇಂದ್ರೀಕೃತ ಸಂಪೂರ್ಣ ಸ್ವಯಂಚಾಲಿತ ಪ್ರಯೋಗಾಲಯ ಸೇರಿದಂತೆ 2,600 ಹಾಸಿಗೆಯುಳ್ಳ ನೂತನ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ತಂತ್ರಜ್ಞಾನ ಮತ್ತು ಆಧುನೀಕರಣದ ಸಂಯೋಜನೆ ದೇಶದ ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿಗೆ ಕಾರಣವಾಗಿದೆ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಜನರನ್ನು ಮುಂದೆ ತರಲು ಭಾರತ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.