ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಇಂದು ದೊಡ್ಡಬಳ್ಳಾಪುರ ದಲ್ಲಿ ಅಧಿಕಾರಿಗಳು ಸಿಎಂ ಕಾರು ತಡೆದು ತಪಾಸಣೆ ನಡೆಸಿದ್ದಾರೆ. ಸಿಎಂ ಪುತ್ರನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಎಂ ಇಂದು ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಬಳಿಯ ಹೊಸಹುಡ್ಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಕಾರು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.