ಭಾರತದ ಪ್ರಜಾಪ್ರಭುತ್ವವನ್ನು ವಿದೇಶಿ ನೆಲದಲ್ಲಿ ಪ್ರಶ್ನಿಸುವ ಮೂಲಕ ದೇಶಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿಗರು ಸಮರ ಸಾರಿರುವ ಸಂದರ್ಭದಲ್ಲೇ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಅವರು ತಮ್ಮ ಭಾಷಣದ ಕುರಿತು ಸಂಸದೀಯ ಆಯೋಗವೊಂದರ ಎದುರು ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಲಂಡನ್ನಲ್ಲಿ ನಾನು ಭಾರತದ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನಷ್ಟೇ ಕೇಳಿದ್ದೇನೆ. ಅದಕ್ಕಾಗಿ ನನ್ನನ್ನು ದೇಶದ್ರೋಹಿ ಎಂದು ಬಿಂಬಿಸಬೇಡಿ. ನಾನು ಭಾರತದ ವಿಚಾರದಲ್ಲಿ ಯಾವುದೇ ದೇಶ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿಲ್ಲ ಎಂದು ಹೇಳಿದ್ದಾರೆ.