ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನನ್ನನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಲಾಗುತ್ತಿದೆ.”ಬಿಜೆಪಿಯವರು ಅಧಿಕಾರ ದುರಪಯೋಗ, ಕುತಂತ್ರ ಮತ್ತು ಷಡ್ಯಂತ್ರ ಎಲ್ಲವನ್ನು ಮಾಡುತ್ತಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನಮಗೆ ಯಾರ ಅನುಕಂಪವೂ ನಮಗೆ ಬೇಡ,” ಎಂದು ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.ಕನಕಪುರದಲ್ಲಿ ಸಹೋದರ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿರುವ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಾಮಪತ್ರ ತಿರಸ್ಕೃತ ಮಾಡುವ ಬಿಜೆಪಿಯ ಷಡ್ಯಂತ್ರ ಅರಿತು ಮುನ್ನಚ್ಚರಿಕೆಯ ಕ್ರಮವಾಗಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅಂತಿಮವಾಗಿ ಕನಕಪುರ ಸ್ಪರ್ಧೆಯಲ್ಲಿ ಯಾರು ಉಳಿಯುತ್ತಾರೆ ಎಂಬುದನ್ನು ಕಾದು ನೋಡಿ. ಬಿಜೆಪಿಯವರು ಏನೇನು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಅಧಿಕಾರಿಗಳೇ ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದರು.