ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಭಾಷಣದಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಫೋನ್‌ಸೇರಿದಂತೆ ಹಲವು ರಾಜಕೀಯ ನಾಯಕರ ಪೋನ್‌ಗಳಲ್ಲಿ ಪೆಗಾಸಸ್ ವೈರಸ್ ಇತ್ತು.”ಈ ಬಗ್ಗೆ ಗುಪ್ತಚರ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ಫೋನ್‌ನಲ್ಲಿ ಏನು ಹೇಳುತ್ತೀರೋ ಅದರ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕರೆಗಳನ್ನು ನಾವು ರೆಕಾರ್ಡ್ ಮಾಡುತ್ತಿದ್ದೇವೆ ಎಂದು ಹೇಳಿದ್ದರು” ಎಂದು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಪೆಗಾಸಸ್ ಬೇಹುಗಾರಿಕೆ ಕುತಂತ್ರಾಂಶವನ್ನು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.