ರಾಜ್ಯದ ಬಿಜೆಪಿ ಸರ್ಕಾರ 10 ಮುಸ್ಲಿಂ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವ ಕ್ರಮವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನನ್ನ ಬಲಿದಾನವಾದರೂ ಸರಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಒಪ್ಪುವುದಿಲ್ಲ. ಹಿಜಬ್‌ನ ಸಲುವಾಗಿ ಮುಸ್ಲಿಂ ಕಾಲೇಜುಗಳನ್ನು ಕೊಡುವುದು ತಪ್ಪು ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ವಿರೋಧ ಮಾಡುತ್ತೇನೆ. ಹಿಂದೂ ಸಂಘಟನೆಗಳ ಒಕ್ಕೂಟದಿಂದ ಅದರ ವಿರುದ್ಧ ಹೋರಾಟ ಮಾಡುತ್ತೇನೆ.ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಸಪೋರ್ಟ್ ಮಾಡಿದ ಪರಿಣಾಮ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.