ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದರೆ ಡಿ.ಕೆ.ಶಿವಕುಮಾರ್ ಅವರನ್ನು ಹೈಕಮಾಂಡ್ ಸಿಎಂ ಮಾಡಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಆ ರೀತಿ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿಎಂ ಆಯ್ಕೆ ಮಾಡುತ್ತೇವೆ ಎಂದು ನಾನು ಹೇಳಿದ್ದೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿ. ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ.ಎಂದಷ್ಟೆ ಹೇಳಿದ್ದೇನೆ. ಬೇರೆದೆಲ್ಲ ನಾನು ಹೇಳಿಲ್ಲ. ಇದು ಶುದ್ಧ ಸುಳ್ಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.