ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದರು. ನಮ್ಮದು 3 ಬಾಗಿಲು ಆದರೆ, ಬಿಜೆಪಿಯವರದ್ದು ಮನೆಯೊಂದು 12 ಬಾಗಿಲು ಆಗಿದೆ ಅವರ ಮನೆ ಅವರು ಮೊದಲು ರಿಪೇರಿ ಮಾಡಿಕೊಳ್ಳಲಿ. ಅವರ ಸರ್ಕಾರವೇ ಕಲುಷಿತವಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಸೇರಿ ಸರ್ಕಾರ ರಚನೆ ಆಗಿದೆ. ದೇಶದಲ್ಲಿ ಎಲ್ಲಾ ಕಡೆ ಆಪರೇಷನ್ ಕಮಲ ನಡೆಯುತ್ತಿದೆ. ತೆಲಂಗಾಣದಲ್ಲಿ ಆಪರೇಷನ್ ಕಮಲ ಬಹಿರಂಗವಾಗಿದೆ. ಇನ್ನೂ ರಾಜ್ಯದಲ್ಲಿ ಆಪರೇಷನ್ ಕಮಲ ಮೂಲಕ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು. ಈಶ್ವರಪ್ಪನಿಂದಾಗಿ ಶಿವಮೊಗ್ಗದಲ್ಲಿ ಗಲಾಟೆ ಆಗುತ್ತಿದೆ. ಶಿವಮೊಗ್ಗದ ಗಲಾಟೆಯಿಂದಾಗಿ ಇಲ್ಲಿ ಯಾರು ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ. ತಾಕತ್ ಇದ್ದರೆ ಶಿವಮೊಗ್ಗದಲ್ಲಿ ಉದ್ದಿಮೆದಾರರನ್ನು ಕರೆತಂದು ಹೂಡಿಕೆ ಮಾಡಲಿ. ಚುನಾವಣೆಗೆ ನಾವು ಯಾವಾಗಲೂ ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.