ಜಾತಿಗಣತಿ ಬಿಡುಗಡೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ,ಜಾತಿ ಗಣತಿಯನ್ನು ನಮ್ಮ ಸರ್ಕಾರ ಬಿಡುಗಡೆ ಮಾಡುತ್ತದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆದಷ್ಟು ಬೇಗ ವರದಿ ಸರ್ಕಾರಕ್ಕೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಆ ವರದಿ ಬಂದ ಮೇಲೆ ಚರ್ಚೆ ಮಾಡುತ್ತೇವೆ. ವರದಿ ಬಂದರೆ ಯಾವ ಯಾವ ಸಮುದಾಯಗಳು ಎಷ್ಟು ಇದ್ದಾರೆ ಎನ್ನುವುದು ಗೊತ್ತಾಗುತ್ತದೆ. ಪ್ರಣಾಳಿಕೆಯಲ್ಲೂ ನಾವು ವರದಿ ಬಿಡುಗಡೆ ಮಾಡುತ್ತೇವೆ. ಅಧ್ಯಕ್ಷರು ವರದಿ ಕೊಟ್ಟ ಬಳಿಕ ಸರ್ಕಾರ ತೀರ್ಮಾನ ಮಾಡುತ್ತದೆ. ಸರ್ಕಾರ ಗಣತಿ ಮಾಡುವ ಜವಾಬ್ದಾರಿ ಸಮಿತಿಗೆ ಕೊಟ್ಟಿತ್ತು. ಜಾತಿಗಣತಿಗೆ 100 ಕೋಟಿ ರೂ.ಗೂ ಹೆಚ್ಚು ಹಣ ಖರ್ಚಾಗಿದೆ. ಇಷ್ಟೆಲ್ಲ ಹಣ ಖರ್ಚು ಮಾಡಿ ವರದಿ ಕೊಡದೇ ಹೋದರೆ ಸರ್ಕಾರಕ್ಕೆ ಅಷ್ಟು ಹಣ ವೇಸ್ಟ್ ಆಗುತ್ತದೆ. ಒಂದು ಉದ್ದೇಶ ಇಟ್ಟುಕೊಂಡು ಜಾತಿಗಣತಿ ಮಾಡಲಾಗಿದೆ. ಸುಮ್ಮನೆ ಸರ್ಕಾರದ ಹಣ ಪೋಲಾಗಲು ಜಾತಿಗಣತಿ ಮಾಡಿಲ್ಲ. ಜಾತಿಗಣತಿಯಿಂದ ಶಾಶ್ವತ ಮಾಹಿತಿ ಇರಲಿ. ಮುಂದೆ ಮೀಸಲಾತಿ ಮಾಡುವಸಮಯದಲ್ಲಿ ಇದು ಅನುಕೂಲ ಆಗುತ್ತದೆ.ರಾಜ್ಯದಲ್ಲಿ 50% ಕ್ಕಿಂತ ಹೆಚ್ಚು ಮೀಸಲಾತಿ ಮಾಡಬೇಕು ಅಂತ ಒತ್ತಾಯ ಇದೆ ಎಂದರು.