ನವೆಂಬರ್‌7 ರಿಂದ 30 ರ ವರೆಗೆ ಪಂಚ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನವೆಂಬರ್‌7 ರಂದು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಛತ್ತೀಸಗಢದಲ್ಲಿ ನ.7 ಮತ್ತು ನ.17 ರಂದು ಎರಡು ಹಂತಗಳಲ್ಲಿ ಮತದಾನ ಇರುತ್ತದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನ.17 ರಂದು ಒಂದೇ ಹಂತದಲ್ಲಿ ನಡೆಯಲಿದೆ. ನಂತರ ನ.23 ರಂದು ರಾಜಸ್ಥಾನದಲ್ಲಿ ಮತ್ತು ನ.30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌3 ಕ್ಕೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಮಿಜೋರಾಂನಲ್ಲಿ 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರಿದ್ದಾರೆ. ಸುಮಾರು 60 ಲಕ್ಷ ಯುವಜನತೆ ಮೊದಲ ಬಾರಿಗೆ 5 ರಾಜ್ಯಗಳ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಅರ್ಹತಾ ದಿನಾಂಕಗಳ ತಿದ್ದುಪಡಿಯಿಂದಾಗಿ 15.39 ಲಕ್ಷ ಯುವ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ರಾಜೀವ್‌ಕುಮಾರ್‌ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *