ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ..?, ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಅಧಿಕಾರಕ್ಕಾಗಿ ಬಿಜೆಪಿಗೆ ಹೋಗಲು ಸಿದ್ದರಾಮಯ್ಯ ಮುಂದಾಗಿದ್ರು ಎಂಬ ಜಿಟಿಡಿ ಮತ್ತು ಕುಮಾರಸ್ವಾಮಿ ಹೇಳಿಕೆಗಳಿಗೆ ತಿರುಗೇಟು ಕೊಟ್ಟ ಸಿಎಂ, ಯಾರನ್ನೋ ಯಾವುದೋ ಸಂದರ್ಭದಲ್ಲಿ ಭೇಟಿ ಮಾಡಿರುತ್ತೇವೆ. ಅದಕ್ಕೆಲ್ಲ ಪಕ್ಷ ಸೇರುತ್ತಾರೆ ಎಂದು ಹೇಳಲು ಸಾಧ್ಯನಾ, ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ವಿರುದ್ಧವೇ ಎಂದರು.ಇತ್ತೀಚೆಗೆ ಅಮಿತ್ ಶಾ ಭೇಟಿ ಮಾಡಿದೆ. ಹಿಂದೆ ಯಾವುದೋ ಸಂದರ್ಭದಲ್ಲಿ ಅಡ್ವಾಣಿ  ಅವರನ್ನ ಭೇಟಿ ಮಾಡಿದ್ದೆ. ಅದಕ್ಕೆಲ್ಲಾ ಈ ಅರ್ಥ ಕಟ್ಟುವುದಕ್ಕೆ ಆಗುತ್ತಾ.  ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ..?, ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ತಮಿಳುನಾಡಿಗೆ ನೀರು ಬಿಡುವ ಕುರಿತು ಪ್ರತಿಕ್ರಿಯಿಸಿ, ನಾವು ಖುಷಿಯಿಂದ ನೀರು ಬಿಡುತ್ತಿಲ್ಲ. ಪ್ರಾಧಿಕಾರದ ಆದೇಶ ಇರುವ ಕಾರಣ ಅನಿವಾರ್ಯವಾಗಿ ನೀರು ಬಿಡುತ್ತಿದ್ದೇವೆ. ತಮಿಳುನಾಡು ವಿನಾಕಾರಣ ಖ್ಯಾತೆ ತೆಗೆದಿದೆ. 21 ರಂದು ಕೋರ್ಟ್ ನಲ್ಲಿ ನಮ್ಮ ಸಂಕಷ್ಟ ವಿವರಿಸುತ್ತೇವೆ. ಬಿಜೆಪಿ ಇದರಲ್ಲಿ ರಾಜಕಾರಣ ಮಾಡಲ್ಲ ಅಂತ ಹೇಳಿ ರಾಜಕಾರಣ ಮಾಡುತ್ತಿದ್ದಾರೆ.ಪ್ರಧಾನಿ ಬಳಿ ನಿಯೋಗ ಹೋಗಲು ಸಿದ್ದರಿದ್ದೆವು. ನಮಗೂ ಪ್ರಧಾನಿ ಭೇಟಿಗೆ ದಿನಾಂಕ ಸಿಗುತ್ತಿಲ್ಲ. ಬಿಜೆಪಿಯವರಾದರೂ ಹೋಗಿ ಕೇಳಲಿ ಎಂದರೆ ಅವರು ಕೇಳುತ್ತಿಲ್ಲ. ಇಲ್ಲಿ ಕುಳಿತು ಹೋರಾಟದ ಕಥೆ ಹೇಳುತ್ತಿದ್ದಾರೆ. ನಾವು ರೈತರ ರಕ್ಷಣೆಗೆ ಈಗಲೂ ಬದ್ದ ಎಂದು ಹೇಳಿದರು.

Leave a Reply

Your email address will not be published. Required fields are marked *