ನಾನು ಮುಖ್ಯಮಂತ್ರಿಯಾಗಿರುವಾಗ ಎಲ್ಲ ಜಾತಿಗಳ ಬಡವರಿಗೆ 7 ಕೆ.ಜಿ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ಕಿ ಭಾಗ್ಯ ಯಾಕಿಲ್ಲ.? ಸಿಎಂ ಬಳಿ ಉತ್ತರವಿದೆಯೇ ? : ಸಿದ್ದರಾಮಯ್ಯ

ದಾಸರಹಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಅನಾವರಣಗೊಳಿಸಿ, ನಂತರ ನಡೆದ ಬೃಹತ್‌ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಶಾಸಕನಾಗಿ. ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತಮ್ಮೆಲ್ಲರ ಆಶೀರ್ವಾದ ಕಾರಣ. ನಾನು ಮುಖ್ಯಮಂತ್ರಿಯಾಗಿರುವಾಗ ಎಲ್ಲ ಜಾತಿಗಳ ಬಡವರಿಗೆ 7 ಕೆ.ಜಿ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಬಸವರಾಜ ಬೊಮ್ಮಾಯಿ ಅವರು ಈಗ ಕೇಂದ್ರ ಸರ್ಕಾರದ ಅಕ್ಕಿಯನ್ನು ಸಿದ್ದರಾಮಯ್ಯ ಕೊಟ್ಟಿದ್ದು ಎನ್ನುತ್ತಾರೆ, ಹಾಗಾದರೆ ಬಿಜೆಪಿ ಅಧಿಕಾರದಲ್ಲಿರುವ ಬೇರೆ ರಾಜ್ಯಗಳಲ್ಲಿ ಈ ಯೋಜನೆ ಯಾಕಿಲ್ಲ? ಇದಕ್ಕೆ ಬೊಮ್ಮಾಯಿ ಅವರ ಬಳಿ ಉತ್ತರವಿದೆಯಾ? ಎಂದು ಪ್ರಶ್ನಿಸಿದ್ದಾರೆ.ಅಂಥಾ ಅವಕಾಶ ಮತ್ತೊಮ್ಮೆ ಸಿಕ್ಕಿದರೆ ನಿಮ್ಮ ಎಲ್ಲಾ ಬೇಡಿಕೆಗಳನ್ನು ಪೂರ್ತಿಗೊಳಿಸುವ ಕೆಲಸ ಮಾಡುತ್ತೇನೆ ಎಂದು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆಯನ್ನ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *