ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಮತ್ತೆ ಬೆದರಿಕೆ ಕೇಳಿಬಂದಿದೆ. ಇತ್ತೀಚೆಗಷ್ಟೇ ಮಾಧ್ಯಮ ಸಂಸ್ಥೆಗೆ ಇಮೇಲ್ ಬೆದರಿಕೆ ಬಂದಿರುವ ಬೆನ್ನಲ್ಲೇ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬರು ‘ಡಯಲ್ 112’ (ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿರುವ ಸಂಖ್ಯೆ) ನಲ್ಲಿ”ನಾನು ಶೀಘ್ರದಲ್ಲೇ ಸಿಎಂ ಯೋಗಿಯನ್ನು ಕೊಲ್ಲುತ್ತೇನೆ” ಎಂದು ಏಪ್ರಿಲ್ 23 ರಂದು ರಾತ್ರಿ 10. 22 ಕ್ಕೆ ಸಂದೇಶ ಕಳಿಸಲಾಗಿದೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಉತ್ತರ ಪ್ರದೇಶ ರಾಜಧಾನಿ ಲಖನೌನ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 506, 507 ಮತ್ತು ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು, ಈ ಸಂದೇಶ ಕಳುಹಿಸಿದವರನ್ನು ರೆಹಾನ್ ಎಂದು ಪೊಲೀಸರು ಗುರುತಿಸಿದ್ದಾರೆ.