ನಾನು ಹಿಂದೂ, ನಾನು ಹನುಮನ ಭಕ್ತ, ರಾಮನ ಭಕ್ತ, ಶಿವಭಕ್ತ- ಡಿಕೆಶಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರ ಕೈ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ,ಡಿಕೆ ಶಿವಕುಮಾರ್ ಹಾಗೂ ರಣದೀಪ್ ಸುರ್ಜೆವಾಲ ನಗರದ ಖಾಸಗಿ ಹೋಟೆಲೊಂದರಲ್ಲಿ ಪ್ರತ್ಯೇಕ ಸಭೆ ನಡೆಸಿ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ ಶಿವಕುಮಾರ್, ಮೋದಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.ಬಜರಂಗದಳ ಬ್ಯಾನ್ ಮಾಡ್ತೀವಿ ಅಂದಿದ್ದಕ್ಕೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯನಿಗೂ ಬಜರಂಗದಳಕ್ಕೂ ಏನ್ ಸಂಬಂಧ? ಬಹಳ ಪ್ರಚೋದನೆ ಉಂಟುಮಾಡ್ತಿದ್ದಾರೆ. ಜನಕ್ಕೆ ಇದೆಲ್ಲವೂ ಅರ್ಥವಾಗಿದೆ. ನಾವೂ ಹನುಮನ ಭಕ್ತರು, ಆಂಜನೇಯನ ಪ್ರವೃತ್ತಿಯವರು, ಆಂಜನೇಯ ಬೇರೆ, ಬಜರಂಗದಳ ಬೇರೆ. ಏಪ್ರಿಲ್ 4ರಂದು ಹನುಮಾನ್ ಚಾಲಿಸಾ ಪಠಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹನುಮಾನ್ ಚಾಲಿಸಾ ದಿನಾ ಪಠಿಸ್ತೀವಿ. ಹಿಂದಿನ ಆರ್‌ಎಸ್‌ಎಸ್ ಬೇರೆಯಿತ್ತು. ಈಗಿನ ಆರ್‌ಎಸ್‌ಎಸ್ ಬೇರೆ ಇದೆ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ಯಾಕೆ ನೋಡಿಕೊಳ್ತೀರಾ? ಮೊದಲು ನೀವು ದೇಶ ಉಳಿಸಿ ಎಂದು ಕುಟುಕಿದ್ದಾರೆ.ಪ್ರಣಾಳಿಕೆಯಿಂದ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಲ್ಲ. ಮೇ 13ರಂದು ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಪಕ್ಕಾ. ನಾನು ಹಿಂದೂ, ನಾನು ಆಂಜನೇಯನ ಭಕ್ತ, ನಾನೂ ರಾಮನ ಭಕ್ತ, ಶಿವಭಕ್ತ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *