ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆ ಹಾಗೂ ಇನ್ನಿತರ ವಿಚಾರವಾಗಿ ದೆಹಲಿಯಲ್ಲಿ ನಮ್ಮ ಹೈಕಮಾಂಡ್‌ನಾಯಕರ ಜೊತೆಗೆ ಮೂರು ಹಂತದ ಸಭೆ ನಡೆಯಲಿದೆ.ನಾಳೆ ದೆಹಲಿಯಲ್ಲಿ ನಮ್ಮ ವರಿಷ್ಠರು ಸಭೆ ನಡೆಸಲಿದ್ದಾರೆ. ಹೀಗಾಗಿ ನಾನು ಇಂದು ದೆಹಲಿಗೆ ಹೋಗ್ತಿದ್ದೇನೆ. ದೆಹಲಿಯಲ್ಲಿ ಪಕ್ಷದ ಕೆಲಸ ಇದೆ, ಸರ್ಕಾರದ ಕೆಲಸ ಇದೆ. ಲೋಕಸಭಾ ಚುನಾವಣೆ ಹಾಗೂ ಪಕ್ಷದ ಹಿತದೃಷ್ಟಿಯಿಂದ ಹೋಗುತ್ತಿದ್ದೇನೆ. ದೆಹಲಿಯಲ್ಲಿ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೇ ಸಭೆ ನಡೆಯುತ್ತಿದೆ. ನಮ್ಮ ಗ್ಯಾರಂಟಿ ಜನರಿಗೆ ತಲುಪುತ್ತಿದೆಯಾ? ಎಂಬ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆಯೂ ದೆಹಲಿಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.ಇನ್ನೂ ನಾಳೆ ನಡೆಯುವ ದೆಹಲಿ ಸಭೆಗೆ ಸೀನಿಯರ್ ಲೀಡರ್, ಎಂಎಲ್‌ಎ, ಎಂಪಿಗಳನ್ನೂ ಕರೆದಿದ್ದೇವೆ. ಮೂರು ಹಂತದಲ್ಲಿ ಈ ಸಭೆಯ ನಡೆಯಲಿದ್ದು, ಪಕ್ಷ ಸಂಘಟನೆ ಕುರಿತು ಚರ್ಚೆಯಾಗಲಿದೆ.