ನಾಳೆ ಸರ್ಕಾರಿ ಕಟ್ಟಡಗಳ ಮೇಲೆ ನಾವೇ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ.: ಡಿಕೆಶಿ

ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಂಟಿಸಿದ್ದೇವೆ. ಇದು ಸತ್ಯ. ಅಧಿಕಾರದಲ್ಲಿ ಇರುವವರು ಇದನ್ನು ಡೈಜೆಸ್ಟ್ ಮಾಡಿಕೊಳ್ಳಬೇಕು ನನ್ನ ಸಿದ್ದರಾಮಯ್ಯ ಫೋಟೋ ಕೂಡ ಅವರು ಪೋಸ್ಟರ್ ಮಾಡಿದ್ದಾರೆ. ಈ ಬಗ್ಗೆ ಸಿಎಂ ಯಾಕೆ ಅಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಎಂದು ಪ್ರಶ್ನಿಸಿ ಕಾಂಗ್ರೆಸ್‌ನ ಎಲ್ಲ ಎಂಎಲ್ಸಿ, ಎಂಎಲ್‌ಎಗಳು, ನಾಳೆ ಸರ್ಕಾರಿ ಕಟ್ಟಡಗಳ ಮೇಲೆ ನಾವೇ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ. ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದರು.

Leave a Reply

Your email address will not be published. Required fields are marked *