ನಾವು ಬಹಳಷ್ಟು ಡ್ರೈವ್ ನೋಡಿದ್ದೇವೆ., ನಾನು ಕಿವಿಯಲ್ಲಿ ಕೇಳಿದ್ದನ್ನು ನಂಬುವುದಿಲ್ಲ. ಕಣ್ಣಾರೆ ನೋಡಿದ್ದನ್ನು ಮಾತ್ರ ನಂಬುತ್ತೇನೆ ದಾಖಲೆ ಇದ್ರೆ ಬಿಡುಗಡೆ ಮಾಡಿ: HDKಗೆ ಡಿ.ಕೆ.ಶಿ ಓಪನ್ ಚಾಲೆಂಜ್!

ಎಚ್‌.ಡಿ.ಕುಮಾರಸ್ವಾಮಿ ಅವರು ತೋರಿಸಿರುವ ಪೆನ್‌ಡ್ರೈವ್ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ನಾವು ಬಹಳಷ್ಟು ಡ್ರೈವ್ ನೋಡಿದ್ದೇವೆ. ನಾನು ಕಿವಿಯಲ್ಲಿ ಕೇಳಿದ್ದನ್ನು ನಂಬುವುದಿಲ್ಲ. ಕಣ್ಣಾರೆ ನೋಡಿದ್ದನ್ನು ಮಾತ್ರ ನಂಬುತ್ತೇನೆ. ಅವರ ಬಳಿ ದಾಖಲೆ ಇದ್ದರೆ ಬಹಿರಂಗಪಡಿಸಲಿ”.ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅಣ್ಣ-ತಮ್ಮನ ಬಗ್ಗೆ ಮಾತನಾಡದೆ, ಬೇರೆ ಯಾರ ಬಗ್ಗೆ ಮಾತನಾಡುತ್ತಾರೆ? ನನ್ನ ಮೇಲೆ ಅವರಿಗೆ ಪ್ರೀತಿ ಹೆಚ್ಚು. ಹೀಗಾಗಿ ಮಾತನಾಡುತ್ತಾರೆ. ನಾನು ಬಹಳ ಸಂತೋಷದಿಂದ ಅವರ ಮಾತನ್ನು ಸ್ವೀಕರಿಸುತ್ತೇನೆ. ಅವರ ದೊಡ್ಡ ಅನುಭವ, ಜ್ಞಾನ ಭಂಡಾರವನ್ನು ನನ್ನ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತೇನೆ ಎಂದು ತಿಳಿಸಿದರು. ಆಪರೇಶನ್ ಕಮಲದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಆಯಿತೇ ಎಂದು ಕೇಳಿದಾಗ, ಇಲ್ಲದಿರುವ ವಿಚಾರ ಸೃಷ್ಟಿಸಬೇಡಿ. ಜನರೇ ಈಗಾಗಲೇ ಆಪರೇಶನ್ ಮಾಡಿದ್ದಾರೆ ಎಂದರು.
ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಲ್ಲದೆ, ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಈ ಬಿಜೆಪಿ ಕುತಂತ್ರವನ್ನು ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರೆಲ್ಲ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಎಚ್ಚರಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಬಡವರ ಧ್ವನಿಯಾಗಿ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಈ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.ರಾಹುಲ್ ಗಾಂಧಿ ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, ಇದನ್ನು ನಾವು ಖಂಡಿಸುತ್ತೇವೆ. ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *