ಸೋಮವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡು, ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರು ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ಅವರು ಆರ್ ಎಸ್ಎಸ್ ನಿಂದ ಬಂದಿದ್ದರೂ ಜಾತ್ಯಾತೀತ ತತ್ವದ ಮೇಲೆಯೇ ಕೆಲಸ ಮಾಡಿದ್ದಾರೆ ನಾನು ಅವರನ್ನು ಹತ್ತಿರದಿಂದ ಕಂಡಿದ್ದೇನೆ. ಜಗದೀಶ್ ಶೆಟ್ಟರ್ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಬಲ ಬಂದಿದ್ದು, 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಬಿಜೆಪಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಾಕ್ಷಣ್ಯವಾಗಿ ತೆಗೆದು ಅಪಮಾನ ಮಾಡಿದರು. ಅವರ ಕಣ್ಣೀರು ಹಾಕಿಸಿದರು. ಅವರು ತಮ್ಮ ಸ್ವಾಭಿಮಾನ ರಕ್ಷಣೆಗೆ ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಅವರು ಎಲ್ಲರ ಜತೆ ಚರ್ಚಿಸಿ ಅಳೆದು ತೂಗಿ ಇದನ್ನು ಸವಾಲು ಎಂದು ಸ್ವೀಕರಿಸಿ ಅಂತಿಮವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಅವರು ಪಕ್ಷ ಸೇರುತ್ತಿದ್ದಾರೆ. ನಾವೆಲ್ಲರೂ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.