ನಾವೆಲ್ಲಾ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ – ತಮ್ಮ ಪಕ್ಷದ ದೌರ್ಬಲ್ಯವನ್ನು ಹೇಳಿಕೊಂಡ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ತಾಲೂಕಿನ ಮತ್ತಿಘಟ್ಟದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ ತಮ್ಮ ಪಕ್ಷದ ದೌರ್ಬಲ್ಯವನ್ನು ಸಚಿವ ಮಾಧುಸ್ವಾಮಿ ಹೇಳಿಕೊಂಡಿದ್ದಾರೆ ನಾವು ರಾಜ್ಯದಲ್ಲಿ ಮತ್ತೇ ಬಿಜೆಪಿ ಸರ್ಕಾರ ತರಲೇಬೇಕು. ನಾವೆಲ್ಲ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ. ಸರ್ಕಾರದ ವಿರುದ್ಧ ಮಾತನಾಡಿದಾಗ ನಾವೇ ಜಿಜ್ಞಾಸೆಗೆ ಒಳಗಾಗುತಿದ್ದೇವೆ. ನೀವೇನು ಎಂದು ನಾವು ವಾಪಸ್ ಕೇಳುತ್ತಿಲ್ಲ. ವಿರುದ್ಧ ಮಾತನಾಡಿದವರಿಗೆ ನಾವು ಮರು ಪ್ರಶ್ನೆ ಹಾಕಲ್ಲ. ನಾವು ಕಾಂಗ್ರೆಸ್‍ನವರ ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ ಎಂದು ತಮ್ಮ ಪಕ್ಷದ ದೌರ್ಬಲ್ಯವನ್ನು ಸಚಿವ ಮಾಧುಸ್ವಾಮಿ ಹೊರಹಾಕಿದ್ದಾರೆ. ಏನೂ ಗೊತ್ತಿಲ್ಲದವರ ಜೊತೆ ನಾನು ಸ್ಪರ್ಧೆ ಮಾಡೋಕೆ ನಿಂತಿದ್ದು ಯಾವ ಜನ್ಮದ ಪಾಪನೋ ಇಂತಹ ಕೆಟ್ಟ ಸ್ಥಿತಿ ನನಗೆ ಬರಬಾರದಿತ್ತು. ಎದುರಾಳಿ ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ತನ್ನ ಸರಿಸಮಾನನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *