ನಾ ನಾಯಕಿ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆ ಘೋಷಿಸಲಿದ್ದಾರೆ ಪ್ರಿಯಾಂಕಾ ಗಾಂಧಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಧ್ಯಾಹ್ನ 1:30 ರಿಂದ 3:30 ರವರೆಗೆ ಅರಮನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಪ್ರಿಯಾಂಕಾ ಗಾಂಧಿ ನಾ ನಾಯಕಿ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳ ಘೋಷಣೆ ಮಾಡಲಿದ್ದಾರೆ. 2023ರ ಚುನಾವಣೆಗೆ ಸಿದ್ಧವಾಗುತ್ತಿರುವ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆ ಘೋಷಣೆಯಾಗುತ್ತಿದೆ.

Leave a Reply

Your email address will not be published. Required fields are marked *