ನಿಮಗೆ ರಾವಣನ ರೀತಿ 100 ತಲೆಗಳಿವೆಯೇ. ಪ್ರಧಾನಿ ಮೋದಿಯನ್ನು ರಾವಣನಿಗೆ ಹೋಲಿಸಿದ ಕಾಂಗ್ರೆಸ್‌ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಪ್ರತಿ ಚುನಾವಣೆಗೂ ಮೋದಿ ಮೇಲೆ ಬಿಜೆಪಿ ಹೆಚ್ಚು ಅವಲಂಬಿತವಾಗಿರುವುದಕ್ಕೆ ಕಾಂಗ್ರೆಸ್‌ನೂತನ ಅದ್ಯಕ್ಷರು ಟೀಕೆ ಮಾಡಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನ ಬೆಹ್ರಾಮ್‌ಪುರದಲ್ಲಿ ಸೋಮವಾರ ರಾತ್ರಿ ಸಾರ್ವಜನಿಕ ರ‍್ಯಾಲಿ ವೇಳೆ ಮಾತನಾಡಿದ ಖರ್ಗೆ, ನಾವು ನಿಮ್ಮ (ಮೋದಿ) ಮುಖವನ್ನು ಕಾರ್ಪೊರೇಷನ್‌ಚುನಾವಣೆಗಳಲ್ಲಿ, ಎಂಎಲ್‌ಎ ಚುನಾವಣೆಗಳಲ್ಲಿ ಹಾಗೂ ಎಂಪಿ ಚುನಾವಣೆಗಳಲ್ಲಿ – ಹೀಗೆ ಎಲ್ಲ ಕಡೆಯೂ ನೋಡುತ್ತೇವೆ. ನಿಮಗೆ ರಾವಣನ ರೀತಿ 100 ತಲೆಗಳಿವೆಯೇ.ಮುನ್ಸಿಪಲ್‌ಚುನಾವಣೆಯಲ್ಲೇ ಆಗಲಿ, ಕಾರ್ಪೊರೇಷನ್‌ಚುನಾವಣೆಯಲ್ಲೇ ಆಗಲಿ, ಮೋದಿಜೀ ಹೆಸರಲ್ಲಿ ಮತ ಕೇಳುವುದನ್ನು ನಾನು ನೋಡುತ್ತಲೇ ಇದ್ದೇನೆ. ಅಭ್ಯರ್ಥಿಯ ಹೆಸರಲ್ಲಿ ಮತ ಕೇಳಿ. ಮುನ್ಸಿಪಾಲಿಟಿಯಲ್ಲಿ ಮೋದಿ ಬಂದು ಕೆಲಸ ಮಾಡುತ್ತಾರಾ. ನಿಮ್ಮ ಅಗತ್ಯದ ಸಮಯದಲ್ಲಿ ಅವರು ಸಹಾಯ ಮಾಡುತ್ತಾರಾ ಎಂದೂ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಷಣದ ವೇಳೆ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *